ADVERTISEMENT

ಉ.ಪ್ರ: ಶಿಕ್ಷಕರ ಹಾಜರಾತಿಗೆ ‘ಸೆಲ್ಫಿ’

ಉತ್ತರ ಪ್ರದೇಶದ ನೂತನ ಕ್ರಮಕ್ಕೆ ಆಕ್ಷೇಪ: ಪ್ರತಿಭಟನೆಯ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2019, 19:38 IST
Last Updated 7 ಸೆಪ್ಟೆಂಬರ್ 2019, 19:38 IST

ಲಖನೌ: ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರ ಹಾಜರಾತಿ ಪರಿಶೀಲನೆಗೆ ಉತ್ತರ ಪ್ರದೇಶ ಸರ್ಕಾರ ನೂತನ ವಿಧಾನ ಕಂಡುಕೊಂಡಿದೆ.

ಹಾಜರಾತಿಯ ಸಾಕ್ಷಿಗೆ ಶಿಕ್ಷಕರು ಪ್ರತಿ ದಿನ ಮೂರು ಬಾರಿ ವಿದ್ಯಾರ್ಥಿಗಳೊಂದಿಗೆ ಸೆಲ್ಫಿ ತೆಗೆದು ಕಳುಹಿಸಬೇಕು ಎಂದು ನಿರ್ದೇಶನ ನೀಡಿದೆ.

‘ಬೆಳಿಗ್ಗೆ ಶಾಲೆಗೆ ಬಂದ ತಕ್ಷಣ ಸೆಲ್ಫಿ ತೆಗೆದುಕೊಳ್ಳಬೇಕು. ಶಾಲಾ ಕಟ್ಟಡದ ಮುಂದೆ ಈ ಸೆಲ್ಫಿ ಚಿತ್ರವನ್ನು ತೆಗೆದುಕೊಳ್ಳಬೇಕು. ಮಧ್ಯಾಹ್ನದ ಊಟದ ವೇಳೆಯಲ್ಲಿ ಎರಡನೇ ಸೆಲ್ಫಿ ಚಿತ್ರವನ್ನು ವಿದ್ಯಾರ್ಥಿಗಳೊಂದಿಗೆ ತೆಗೆದುಕೊಳ್ಳಬೇಕು. ಶಾಲಾ ವೇಳೆ ಮುಗಿದ ಬಳಿಕ ಮೂರನೇ ಚಿತ್ರವನ್ನು ತೆಗೆದುಕೊಳ್ಳಬೇಕು’ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಈ ಸೆಲ್ಫಿ ಚಿತ್ರಗಳನ್ನು ರಾಜ್ಯ ಸರ್ಕಾರ ರೂಪಿಸಿರುವ ವೆಬ್‌ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಈ ಉದ್ದೇಶಕ್ಕಾಗಿಯೇ ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಪ್ರೇರಣಾ ಹೆಸರಿನ ಆ್ಯಪ್‌ ಮತ್ತು ಪ್ರೇರಣಾ ವೀ ಪೋರ್ಟಲ್‌ ಆರಂಭಿಸಿದೆ. ಪ್ರಾಥಮಿಕ ಶಾಲೆಗಳ ಶಿಕ್ಷಕರು ಪದೇ ಪದೇ ಗೈರುಹಾಜರಾಗುತ್ತಿದ್ದಾರೆ ಎನ್ನುವ ದೂರುಗಳು ಬಂದ ಕಾರಣ ಈ ವ್ಯವಸ್ಥೆ ರೂಪಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಕ್ರಮಕ್ಕೆ ಶಿಕ್ಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.