ADVERTISEMENT

ಎಂಎನ್‌ಎಸ್‌ ಕಾರ್ಯಕರ್ತರ ಪುಂಡಾಟಿಕೆ

ಪಿಟಿಐ
Published 11 ಅಕ್ಟೋಬರ್ 2017, 19:30 IST
Last Updated 11 ಅಕ್ಟೋಬರ್ 2017, 19:30 IST

ಸಾಂಗ್ಲಿ: ಇಲ್ಲಿನ ಕುಪ್ವಾಡ್‌ದ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ (ಎಂಐಡಿಸಿ) ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ಕೆಲಸಕ್ಕಿರುವ ಉತ್ತರ ಭಾರತದ ಕಾರ್ಮಿಕರ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್‌ಎಸ್‌) ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

‘ಕಾರ್ಖಾನೆಗಳಲ್ಲಿ ಸ್ಥಳೀಯ ಯುವಕರಿಗೆ ಆದ್ಯತೆ ನೀಡಬೇಕು. ಇಲ್ಲಿಯವರನ್ನೇ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಗುಂಪೊಂದು ಆಗ್ರಹ ಪಡಿಸಿ, ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಉತ್ತರ ಭಾರತದ ರಾಜ್ಯಗಳ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದೆ. ಹಲ್ಲೆ ನಡೆಸಿದವರು ರಾಜ್‌ ಠಾಕ್ರೆ ನೇತೃತ್ವದ ಎಂಎನ್‌ಎಸ್‌ ಕಾರ್ಯಕರ್ತರು ಎಂದು ಶಂಕಿಸಲಾಗಿದೆ’ ಎಂದು ಎಂಐಡಿಸಿ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಎ.ಎಂ.ಕದಂ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಕಾರ್ಮಿಕರೊಬ್ಬರು ನೀಡಿರುವ ದೂರನ್ನು ದಾಖಲಿಸಿಕೊಂಡು, ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.