ADVERTISEMENT

ಎಂಜಿನಿಯರಿಂಗ್ ಪ್ರವೇಶ: ಅಖಿಲ ಭಾರತ ಸಿಇಟಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2011, 18:35 IST
Last Updated 14 ಸೆಪ್ಟೆಂಬರ್ 2011, 18:35 IST

ನವದೆಹಲಿ (ಪಿಟಿಐ): ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಅಖಿಲ ಭಾರತ ಮಟ್ಟದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಮಂಡಲಿ ಬುಧವಾರ ಶಿಫಾರಸು ಮಾಡಿದೆ.

ಐದು ತಾಸಿಗೂ ಹೆಚ್ಚು ಕಾಲ ಸಭೆ ನಡೆಸಿದ ನಂತರ ಮಂಡಲಿ ಈ ಪ್ರಸ್ತಾವ ಮುಂದಿಟ್ಟಿದ್ದು ಇದನ್ನು 2013 ಇಸವಿಯಿಂದ ಜಾರಿಗೆ ತರುವ ಉದ್ದೇಶ ಹೊಂದಿದೆ.

ಈ ಶಿಫಾರಸನ್ನು ಜಾರಿಗೆ ತರುವ ಮುನ್ನ ಕೇಂದ್ರ ಶೈಕ್ಷಣಿಕ ಸಲಹಾ ಮಂಡಲಿ (ಸಿಎಬಿಇ) ಮತ್ತು ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಅಭಿಪ್ರಾಯ ಆಲಿಸಲಾಗುವುದು ಎಂದು ಮಾನವ ಸಂಪನ್ಮೂಲ ಸಚಿವ ಕಪಿಲ್ ಸಿಬಲ್ ಸಭೆಯ ನಂತರ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.