ನವದೆಹಲಿ (ಐಎಎನ್‌ಎಸ್): ಮುಂಬರುವ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು (ಎಎಪಿ) 20 ಅಭ್ಯರ್ಥಿಗಳನ್ನೊಳಗೊಂಡ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.
ಕಿರುತೆರೆ ನಟ ದಿವಂಗತ ಜಸ್ಪಾಲ್ ಭಟ್ಟಿ ಅವರ ಪತ್ನಿ ಸವಿತಾ ಭಟ್ಟಿ ಅವರು ಚಂಡೀಗಡದಿಂದ ಸ್ಪರ್ಧಿಸಲಿದ್ದಾರೆ. ದೆಹಲಿ ವಿಶ್ವವಿದ್ಯಾಲಯ ಪ್ರೊಫೆಸರ್, ಸಮಾಜಶಾಸ್ತ್ರಜ್ಞ ಆನಂದ್ ಕುಮಾರ್ ಈಶಾನ್ಯ ದೆಹಲಿ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ.
ಇವರ ಜೊತೆಗೆ, ಮಧ್ಯಪ್ರದೇಶ ಹಾಗೂ ಒಡಿಶಾದ ತಲಾ ಏಳು ಕ್ಷೇತ್ರಗಳಿಗೆ, ಕೇರಳದ ಎರಡು ಮತ್ತು ಬಿಹಾರದ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಎಎಪಿ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.