ADVERTISEMENT

ಎನ್‌ಎಚ್‌ಆರ್‌ಸಿ ನೋಟಿಸ್‌

ಪಿಟಿಐ
Published 2 ಏಪ್ರಿಲ್ 2018, 19:30 IST
Last Updated 2 ಏಪ್ರಿಲ್ 2018, 19:30 IST

ನವದೆಹಲಿ: ಪಶ್ಚಿಮ ಬಂಗಾಳದ ಅಸನ್ಸೋಲ್‌–ರಾಣಿಗಂಜ್‌ನಲ್ಲಿ ರಾಮನವಮಿ ಆಚರಣೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ಸರ್ಕಾರಕ್ಕೆ ನೋಟಿಸ್‌ ನೀಡಿದೆ.

ಸಾರ್ವಜನಿಕರ ಘನತೆ  ಕಾಪಾಡುವಲ್ಲಿ ಪೊಲೀಸ್‌ ಇಲಾಖೆ ವಿಫಲವಾಗಿದೆ ಎಂದು ಎನ್‌ಎಚ್‌ಆರ್‌ಸಿ ಆರೋಪಿಸಿದೆ ಅಲ್ಲದೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಪೊಲೀಸ್‌ ಮಹಾ ನಿರ್ದೇಶಕರಿಗೆ ನೋಟಿಸ್‌ ಜಾರಿಗೊಳಿಸಿ, ನಾಲ್ಕು ವಾರಗಳೊಳಗೆ ವರದಿ ನೀಡುವಂತೆ ಸೂಚಿಸಿದೆ.

ಗಲಭೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, ಇಬ್ಬರು ಪೊಲೀಸ್‌ ಅಧಿಕಾರಿಗಳು ಗಾಯಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.