ADVERTISEMENT

ಎನ್‌ಡಿಎ ಜತೆ ಮೈತ್ರಿ ಇಲ್ಲ : ಟಿಎಂಸಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 7:25 IST
Last Updated 1 ಅಕ್ಟೋಬರ್ 2012, 7:25 IST

ಕೋಲ್ಕತ್ತ (ಐಎಎನ್ಎಸ್) : ತೃಣಮೂಲ ಕಾಂಗ್ರೆಸ್ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎ ಅಥವಾ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್ ಸೋಮವಾರ ಇಲ್ಲಿ ತಿಳಿಸಿದರು. 

~ಕಾಂಗ್ರೆಸ್ ತನ್ನ ಚಿಲ್ಲರೆ ಮಾರುಕಟ್ಟೆಯಲ್ಲಿ ಎಫ್‌ಡಿಐ ಮತ್ತು ತೈಲ ಬೆಲೆ ಏರಿಕೆ ನಿರ್ಧಾರವನ್ನು ಹಿಂದೆ ಪಡೆದರೆ, ಮೈತ್ರಿ ಕುರಿತು ಅವರು ಟಿಎಂಸಿ ಬಳಿ ಪ್ರಸ್ತಾಪಿಸಬಹುದು~ ಎಂದು ಮುಕುಲ್ ರಾಯ್ ಹೇಳಿದರು.

ಆರ್ಥಿಕ ಪುನಶ್ಚೇತನಕ್ಕಾಗಿ ಯುಪಿಎ ಸರ್ಕಾರ, ಚಿಲ್ಲರೆ ಮಾರುಕಟ್ಟೆಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಮತ್ತು ಡೀಸೆಲ್ ಬೆಲೆ ಏರಿಕೆ ನಿರ್ಧಾರವನ್ನು ತೆಗೆದುಕೊಂಡಿದ್ದನ್ನು ವಿರೋಧಿಸಿ, ತೃಣಮೂಲ ಕಾಂಗ್ರೆಸ್ ಯುಪಿಎ ಜತೆ ಮೈತ್ರಿ ಮುರಿದುಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.