ಅಗರ್ತಲಾ(ಐಎಎನ್‌ಎಸ್): ಉದ್ದೇಶಿತ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳ (ಎನ್‌ಸಿಟಿಸಿ) ರಚನೆ ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಏಪ್ರಿಲ್ 16ರಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆಯುವ ಸಾಧ್ಯತೆ ಇದೆ ಎಂದು ತ್ರಿಪುರಾದ ಮುಖ್ಯ ಕಾರ್ಯದರ್ಶಿ ಎಸ್.ಕೆ ಪಾಂಡಾ ಶುಕ್ರವಾರ ತಿಳಿಸಿದ್ದಾರೆ.
ಕಾಂಗ್ರೆಸ್ಸೇತರ ಆಡಳಿತ ಹೊಂದಿರುವ ರಾಜ್ಯಗಳು ಈ ಪ್ರಸ್ತಾವವನ್ನು ವಿರೋಧಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಕೇಂದ್ರ ಸರ್ಕಾರ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ತ್ರಿಪುರಾದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಕೂಡಾ ಎನ್‌ಸಿಟಿಸಿ ಸ್ಥಾಪನೆಯನ್ನು ಖಂಡಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.