
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಕೇಂದ್ರ ಸರ್ಕಾರದ ಉದ್ದೇಶಿತ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ಸ್ಥಾಪನೆ ವಿಷಯ ತೀವ್ರ ವಿವಾದಕ್ಕೆ ಗುರಿಯಾಗಿರುವುದರ ಮಧ್ಯೆಯೇ ಸೋಮವಾರ ಈ ಸಂಬಂಧ ಸಭೆಯೊಂದು ನಡೆಯಲಿದೆ.
ಗೃಹ ಸಚಿವಾಲಯದ ಉನ್ನತ ಅಧಿಕಾರಿಗಳು, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಇಲಾಖೆಗಳ ಮುಖ್ಯಸ್ಥರು ಪಾಲ್ಗೊಳ್ಳಲಿರುವ ಈ ಸಭೆಯಲ್ಲಿ, ಎನ್‌ಸಿಟಿಸಿ ಬಗೆಗಿನ ವಿವಿಧ ರಾಜ್ಯಗಳ ಶಂಕೆಗಳನ್ನು ನಿವಾರಿಸುವ ಯತ್ನ ನಡೆಯಲಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಆರ್.ಕೆ.ಸಿಂಗ್ ಅವರು ಎನ್‌ಸಿಟಿಸಿ ಸ್ಥಾಪನೆ ರಾಜ್ಯದ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲ ಎಂಬುದನ್ನು ಸಭೆಯಲ್ಲಿ ಮನವರಿಕೆ ಮಾಡಿಕೊಡಲು ಯತ್ನಿಸಲಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.