ನವದೆಹಲಿ (ಐಎಎನ್ಎಸ್):
ವಿಮಾ ಮತ್ತು ಪಿಂಚಣಿ ಸೇವಾ ವಲಯದಲ್ಲೂ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ)ಗೆ ಅನುಮತಿ ನೀಡುವ ಬಗ್ಗೆ ಸರ್ಕಾರದ ನಿರ್ಧಾರ ಸಂಸತ್ತಿನಲ್ಲಿ ಅಂಗೀಕಾರ ಪಡೆಯಲಿದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ.
ಎಡ ಪಕ್ಷಗಳು ಮತ್ತು ಬಿಜೆಪಿಯ ವಿರೋಧದ ನಡುವೆಯೂ ಈ ಕಾಯ್ದೆ ಕಾರ್ಯರೂಪಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ನ ವಕ್ತಾರ ರಸೀದ್ ಅಲ್ವಿ ವ್ಯಕ್ತಪಡಿಸಿದ್ದಾರೆ.
ಈ ವಿಧೇಯಕ ರಾಜ್ಯ ಸಭೆಯಲ್ಲಿ ಅ ಂಗೀಕಾರ ಪಡೆಯ ಬೇಕಾದರೆ ಕೋರಂ ಸಮಸ್ಯೆ ತಲೆದೊರುವುದಿಲ್ಲವೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅಲ್ವಿ, ಇಲ್ಲಿ ಗಣಿತದ ಪ್ರಶ್ನೆಯೇ ಇಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.