ಹೈದರಾಬಾದ್ (ಐಎಎನ್ಎಸ್): ಎಮ್ಮಾರ್-ಎಪಿಐಐಸಿ ಟೌನ್‌ಶಿಪ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಎಲ್. ವಿ. ಸುಬ್ರಮಣಿಯಂ ಅವರಿಗೆ ಸೋಮವಾರ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ನೀಡಿತು.
ಸುಬ್ರಮಣಿಯಂ ಅವರು ಪ್ರಸ್ತುತ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಳಿಗ್ಗೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಎಲ್. ವಿ. ಸುಬ್ರಮಣಿಯಂ ಅವರಿಗೆ ನ್ಯಾಯಾಲಯವು ರೂ. 25ಸಾವಿರ ವೈಯಕ್ತಿಕ ಬಾಂಡ್ ನೀಡುವಂತೆ ಆದೇಶಿಸಿ, ಜಾಮೀನು ಮಂಜೂರು ಮಾಡಿತು.
ಎಲ್. ವಿ. ಸುಬ್ರಮಣಿಯಂ ಅವರು ಈ ಪ್ರಕರಣದಲ್ಲಿ 10ನೇ ಆರೋಪಿಯಾಗಿದ್ದರು.
ಇದೇ ಸಮಯದಲ್ಲಿ ಎಮ್ಮಾರ್ ಎಂಜಿಎಫ್ ನ ಹಣಕಾಸು ಮುಖ್ಯಸ್ಥ (ದಕ್ಷಿಣ) ವಿಜಯ್ ರಾಘವ್ ಅವರು ಸಲ್ಲಿಸಿದ್ದ ಜಾಮೀನು ಮನವಿ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮಂಗಳವಾರಕ್ಕೆ ಮುಂದೂಡಿತು.
ಇದೇ ಸಂದರ್ಭದಲ್ಲಿ ನ್ಯಾಯಾಲಯವು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳು ಜುಲೈ 9ರಂದು ನ್ಯಾಯಾಲಯದಲ್ಲಿ ಹಾಜರಿರುವಂತೆ ನಿರ್ದೆಶಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.