ADVERTISEMENT

ಎಲ್‌ಪಿಜಿ ಮಿತಿ ಏರಿಕೆಗೆ ಚಿಂತನೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2012, 20:33 IST
Last Updated 30 ನವೆಂಬರ್ 2012, 20:33 IST

ನವದೆಹಲಿ (ಪಿಟಿಐ): ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್‌ಗಳ ಮಿತಿ ಏರಿಕೆಗೆ ಸರ್ಕಾರ ಚಿಂತನೆ ನಡೆಸಿದ್ದು, ಮುಂದಿನ ಕೆಲ ದಿನಗಳಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಸಚಿವ ಎಂ. ವೀರಪ್ಪ ಮೊಯಿಲಿ ಲೋಕಸಭೆಗೆ ತಿಳಿಸಿದ್ದಾರೆ.

`ಆರಕ್ಕಿಂತ ಹೆಚ್ಚು ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ನೀಡುವ ಕುರಿತು ನಾವು ಚಿಂತಿಸುತ್ತಿದ್ದೇವೆ. ಆದರೆ, ನಮಗೆ ಸ್ವಲ್ಪ ಕಾಲಾವಕಾಶ ಬೇಕಿದೆ' ಎಂದು ಮೊಯಿಲಿ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.
ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಎತ್ತಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

ಪ್ರಸ್ತುತ ಸರ್ಕಾರ ರೂ 1.64 ಲಕ್ಷ ಕೋಟಿ ಸಬ್ಸಿಡಿ ನೀಡುತ್ತಿದೆ. ಜಗತ್ತಿನಲ್ಲಿ ಉತ್ಪಾದನೆಯಾಗುವ ಎಲ್‌ಪಿಜಿ ಪೈಕಿ ಶೇ 75ರಷ್ಟು ಭಾರತವೇ ಬಳಸುತ್ತಿದೆ. ಇತರ ದೇಶಗಳಲ್ಲಿ ಗ್ಯಾಸ್ ಮತ್ತು ವಿದ್ಯುತ್ ಎರಡನ್ನೂ ಬಳಸಲಾಗುತ್ತದೆ. ನಮ್ಮ ಬಳಿ ಹೆಚ್ಚುವರಿ ವಿದ್ಯುತ್ ಇಲ್ಲ ಎಂದು ಮೊಯಿಲಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT