ಭೋಪಾಲ್: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂನಲ್ಲಿ ಕ್ರಮ ಸಂಖ್ಯೆ ಇಲ್ಲದ ₹ 500ರ ನಕಲಿ ನೋಟು ಪತ್ತೆಯಾಗಿದೆ.
ಮಧ್ಯಪ್ರದೇಶದ ದಾಮೊಹ್ ಎಂಬ ಪ್ರದೇಶದಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನಕಲಿ ನೋಟುಗಳು ವಿತ್‍ಡ್ರಾ ಆಗಿವೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮ ಎಎನ್‌ಐ ವರದಿ ತಿಳಿಸಿದೆ.
ಉತ್ತರ ಭಾರತದಲ್ಲಿ ಕಳೆದ 10 ದಿನಗಳಲ್ಲಿ ಎಟಿಎಂಗಳಲ್ಲಿ ಖೋಟಾನೋಟುಗಳು ಬರುತ್ತಿರುವುದು ಇದು ಮೂರನೇ ಬಾರಿ. ಸೋಮವಾರದಂದು ಹರ್ಯಾಣದ ರೋಹ್ಟಕ್‌ನಲ್ಲಿರುವ ಐಸಿಐಸಿಐ ಬ್ಯಾಂಕ್ ಎಟಿಎಂನಲ್ಲಿ ಆಟಿಕೆ ನೋಟುಗಳು ಪತ್ತೆಯಾಗಿದ್ದವು,
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.