ADVERTISEMENT

ಎಸ್‌ಸಿ, ಎಸ್‌ಟಿ ಕಾಯ್ದೆ: ಮೇ 3ಕ್ಕೆ ಅರ್ಜಿ ವಿಚಾರಣೆ

ಪಿಟಿಐ
Published 27 ಏಪ್ರಿಲ್ 2018, 19:30 IST
Last Updated 27 ಏಪ್ರಿಲ್ 2018, 19:30 IST

ನವದೆಹಲಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ (ಎಸ್‌ಸಿ, ಎಸ್‌ಟಿ ಕಾಯ್ದೆ) ಬಗ್ಗೆ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮೇ 3ರಂದು ವಿಚಾರಣೆಗೆ ಎತ್ತಿಕೊಳ್ಳಲಾಗುವುದು.

ಎಸ್‌ಸಿ, ಎಸ್‌ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾದ ತಕ್ಷಣವೇ ಆರೋಪಿಗಳನ್ನು ಬಂಧಿಸಬಾರದು ಎಂದು ಮಾರ್ಚ್‌ 20ರಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು.

‘ಈ ಕಾಯ್ದೆಯನ್ನು ಬಳಸಿಕೊಂಡು ಹಲವು ಸಂದರ್ಭಗಳಲ್ಲಿ ನಿರಪರಾಧಿಗಳನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಹಾಗೆಯೇ, ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಮಾಡಲಾಗಿದೆ. ಕಾಯ್ದೆಯ ಉದ್ದೇಶ ಇದಾಗಿರಲಿಲ್ಲ’ ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.