ADVERTISEMENT

ಏಕಕಾಲಕ್ಕೆ ಚುನಾವಣೆ?

ಪಿಟಿಐ
Published 14 ಏಪ್ರಿಲ್ 2018, 19:30 IST
Last Updated 14 ಏಪ್ರಿಲ್ 2018, 19:30 IST
ಸಾಂದರ್ಭಿಕ ಚಿತ್ರ.
ಸಾಂದರ್ಭಿಕ ಚಿತ್ರ.   

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗೆ 2019ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಲು ಸಾಧ್ಯವೆ ಎಂದು ಚುನಾವಣಾ ಆಯೋಗದ ಅಭಿಪ್ರಾಯ ಕೇಳಲು ಕೇಂದ್ರ ನಿರ್ಧರಿಸಿದೆ.

ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಕಾನೂನು ಆಯೋಗ ವರದಿ ಸಲ್ಲಿಸಿದ ಬಳಿಕ ಕೇಂದ್ರ ಸರ್ಕಾರವು ಆಯೋಗದ ಅಭಿಪ್ರಾಯ ಕೇಳಲಿದೆ.

‘ಒಂದು ದೇಶ, ಒಂದು ಚುನಾವಣೆ’ ಎನ್ನುವ ಸರ್ಕಾರದ ಕಲ್ಪನೆಗೆ ರೂಪ ನೀಡಲು 2019 ಹಾಗೂ 2024ರಲ್ಲಿ ಲೋಕಸಭೆ ಹಾಗೂ ವಿವಿಧ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಕಾನೂನು ಆಯೋಗ ಶಿಫಾರಸು ಮಾಡುವ ಸಾಧ್ಯತೆ ಇದೆ.

ADVERTISEMENT

2019ರ ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಪ್ರಸ್ತಾಪ ಇದೆ. ಈ ರಾಜ್ಯಗಳಲ್ಲಿ ವಿಧಾನಸಭೆಯ ಅವಧಿ 2021ಕ್ಕೆ ಪೂರ್ಣಗೊಳ್ಳಲಿದ್ದು, ಮುಂಚಿತವಾಗಿ ಚುನಾವಣೆ ನಡೆಸಲು ಅವಧಿ ಮೊಟಕುಗೊಳಿಸಬೇಕಾಗುತ್ತದೆ.

ಎರಡನೇ ಹಂತದಲ್ಲಿ 2024ರ ಲೋಕಸಭಾ ಚುನಾವಣೆ ಜತೆಗೆ ಉತ್ತರ ಪ್ರದೇಶ, ಗುಜರಾತ್, ಕರ್ನಾಟಕ, ದೆಹಲಿ, ಪಂಜಾಬ್‌ಗಳಲ್ಲಿ ಚುನಾವಣೆ ನಡೆಸಲು, ಇಲ್ಲಿನ ವಿಧಾನಸಭೆಗಳ ಅವಧಿ ವಿಸ್ತಾರ ಮಾಡಬೇಕಾಗುತ್ತದೆ.

ಇದಕ್ಕಾಗಿ ಸಂವಿಧಾನಕ್ಕೆ ಹಾಗೂ ಜನಪ್ರತಿನಿಧಿ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.