ADVERTISEMENT

ಏರ್‌ಟೆಲ್, ವೊಡಾಫೋನ್ ವಿರುದ್ಧ ಸಿಬಿಐ ಆರೋಪಪಟ್ಟಿ

`2ಜಿ' ತರಂಗಾಂತರ ಹಂಚಿಕೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2012, 19:59 IST
Last Updated 21 ಡಿಸೆಂಬರ್ 2012, 19:59 IST

ನವದೆಹಲಿ (ಐಎಎನ್‌ಎಸ್): `ಎನ್‌ಡಿಎ'  ಅವಧಿಯಲ್ಲಿ ಹೆಚ್ಚುವರಿ 2ಜಿ ತರಂಗಾಂತರಗಳನ್ನು ಪಡೆದಿದ್ದಕ್ಕಾಗಿ ಸಿಬಿಐ ಶುಕ್ರವಾರ ಭಾರ್ತಿ ಏರ್‌ಟೆಲ್, ವೊಡಾಫೋನ್ ಇಂಡಿಯಾ ಮತ್ತು ಹಚಿಸನ್ ಮ್ಯಾಕ್ಸ್ ಸ್ಟರ್ಲಿಂಗ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ.
ಅಪರಾಧದ ಸಂಚು ರೂಪಿಸಿದ್ದಕ್ಕಾಗಿ ಮಾಜಿ ದೂರಸಂಪರ್ಕ ಕಾರ್ಯದರ್ಶಿ ಶ್ಯಾಮಲಾಲ್ ಘೋಷ್ ಮತ್ತು ಇತರ ಮೂರು ಟೆಲಿಕಾಂ ಕಂಪೆನಿಗಳ ಹೆಸರನ್ನು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ.

ಎನ್‌ಡಿಎ ಅವಧಿಯಲ್ಲಿ ಪ್ರಮೋದ್ ಮಹಾಜನ್ ದೂರಸಂಪರ್ಕ ಸಚಿವರಾಗಿದ್ದಾಗ ಈ ಅವ್ಯವಹಾರ ನಡೆದಿದೆ ಎಂದು ಅಟಾರ್ನಿ ಜನರಲ್ ಜಿ.ಇ. ವಹನ್ವತಿ ಅಭಿಪ್ರಾಯ ನೀಡಿದ ಹಿನ್ನೆಲೆಯಲ್ಲಿ ಈ  ಕಂಪೆನಿಗಳ ವಿರುದ್ಧ ಕ್ರಮ ಜರುಗಿಸುವಂತೆ ನ. 29ರಂದು ಸುಪ್ರೀಂಕೋರ್ಟ್ ಸಿಬಿಐಗೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.