
ಪ್ರಜಾವಾಣಿ ವಾರ್ತೆಮುಂಬೈ(ಪಿಟಿಐ): ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಇತ್ತೀಚೆಗೆ 17 ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿರುವ ಕ್ರಮ ಕಾನೂನು ಬಾಹಿರ ಎಂದು ಆರೋಪಿಸಿ ಭಾರತೀಯ ವಿಮಾನ ಚಾಲಕರ ಸಂಘಟನೆ ಸೋಮವಾರ ಪ್ರತಿಭಟನೆ ನಡೆಸಿದೆ.
ದೇಶದಾದ್ಯಂತ 3,600 ಸದಸ್ಯರನ್ನು ಒಳಗೊಂಡಿರುವ ಎಐಸಿಸಿಎ ಸಂಘಟನೆಯು ಏರ್ ಇಂಡಿಯಾ ಸಂಸ್ಥೆ ಸಿಬ್ಬಂದಿ ವಜಾಗೊಳಿಸಿರುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಸಮಸ್ಯೆಯನ್ನು ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ.
ಮುಂಬರುವ ದಿನಗಳು ಬೇಸಿಗೆ ರಜೆ ದಿನಗಳಾಗಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಸಮಸ್ಯೆ ಮುಂದುವರಿದಲ್ಲಿ ಪ್ರಯಾಣಿಕರಿಗೆ ತೊಂದರೆಯಾಗಲಿದೆ ಹಾಗಾಗಿ ಆಡಳಿತ ಮಂಡಳಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.