ADVERTISEMENT

ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ ಡಿ.12 ರ ವರೆಗೆ ನ್ಯಾಯಾಂಗ ಬಂಧನಕ್ಕೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2011, 10:20 IST
Last Updated 29 ನವೆಂಬರ್ 2011, 10:20 IST
ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ ಡಿ.12 ರ ವರೆಗೆ ನ್ಯಾಯಾಂಗ ಬಂಧನಕ್ಕೆ
ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ ಡಿ.12 ರ ವರೆಗೆ ನ್ಯಾಯಾಂಗ ಬಂಧನಕ್ಕೆ   

ಹೈದರಾಬಾದ್: ಅಕ್ರಮ ಗಣಿಗಾರಿಕೆಯಲ್ಲಿ  ಭಾಗಿಯಾಗಿರುವ ಆರೋಪದ ಮೇಲೆ ಸೋಮವಾರ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಆಂಧ್ರಪ್ರದೇಶದ ವಾಣಿಜ್ಯ ಇಲಾಖೆಯ ಮಾಜಿ ಕಾರ್ಯದರ್ಶಿ, ಐಎಎಸ್ ಅಧಿಕಾರಿ ವೈ. ಶ್ರೀಲಕ್ಷ್ಮಿ ಅವರನ್ನು ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯವು ಡಿಸೆಂಬರ್ 12 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

ಇದೇ ವೇಳೆ ನ್ಯಾಯಾಲಯವು ವಿಚಾರಣೆಗಾಗಿ ಶ್ರೀಲಕ್ಷ್ಮಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿದ್ದು, ಡಿಸೆಂಬರ್ 1 ರಂದು ಸಾಯಂಕಾಲದೊಳಗೆ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ಸಿಬಿಐಗೆ ಹೇಳಿದೆ.

ಸದ್ಯ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಲಕ್ಷ್ಮಿ ಅವರನ್ನು ಗಣಿಗಾರಿಕೆ ಅವ್ಯವಹಾರದ ಪ್ರಕರಣದಲ್ಲಿ ನಾಲ್ಕನೇ ಆಪಾದಿತರನ್ನಾಗಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಆಂಧ್ರಪ್ರದೇಶದಲ್ಲಿ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ಬಂಧನಕ್ಕೆ ಒಳಗಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.