ADVERTISEMENT

ಐಟಿ ದಾಳಿ: 12 ಕೋಟಿ ನಗದು ವಶ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2011, 18:30 IST
Last Updated 12 ಮಾರ್ಚ್ 2011, 18:30 IST

ಈರೋಡ್ (ಪಿಟಿಐ): ಆದಾಯ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಶನಿವಾರ ಇಲ್ಲಿಗೆ ಸಮೀಪದ ಕಾಸಿಪಾಳ್ಯಂ ನಿವಾಸಿಯೊಬ್ಬರ ಮನೆಯಿಂದ ಸುಮಾರು 11.50 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಕ್ಷಿಪ್ರ ಕಾರ್ಯಾಚರಣೆ ಪಡೆಯು ಬುಧವಾರ ಇಬ್ಬರು ವ್ಯಕ್ತಿಗಳಿಂದ ಲೆಕ್ಕಕ್ಕೆ ಸಿಗದ 50 ಲಕ್ಷ ರೂಪಾಯಿಯನ್ನು ವಶಪಡಿಸಿಕೊಂಡ ಮಾಹಿತಿಯನ್ನು ಜಿಲ್ಲಾಧಿಕಾರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ನೀಡಿದ ನಂತರ ಈ ದಾಳಿ ನಡೆದಿದೆ.

ತೆರಿಗೆ ವಂಚಕರಲ್ಲಿ ಒಬ್ಬಾತ ಮನೆ ಮಾಲೀಕ ಜೀವನ್‌ಧಾಮ್. ಈತ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದಾನೆ. ಇಲಾಖೆ ಮುಂದಿನ ತನಿಖೆ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಈ ಮಧ್ಯೆ, ಪೊಲೀಸರು ಕಳೆದ ರಾತ್ರಿ ಭವಾನಿಯಿಂದ ಕಾವಿಂದಪಾಡಿಗೆ ಹೋಗುತ್ತಿದ್ದ ಕಾರಿನಲ್ಲಿ  8.50 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. 

 ಕಾರಿನಲ್ಲಿದ್ದ ಮೂವರನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಏಪ್ರಿಲ್ 13ರಂದು ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀತಿ-ಸಂಹಿತೆ ಜಾರಿಯಲ್ಲಿದು, ಇದರಿಂದಾಗಿ   ಇಂತಹ ದಾಳಿಗಳನ್ನು ಕೈಗೊಳ್ಳ     ಲಾಗುತ್ತಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.