ADVERTISEMENT

ಐದು ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಉಚಿತ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2013, 19:59 IST
Last Updated 8 ಸೆಪ್ಟೆಂಬರ್ 2013, 19:59 IST

ಚಂಡೀಗಡ (ಐಎಎನ್‌ಎಸ್): ಸರ್ಕಾರಿ ಆಸ್ಪತ್ರೆಗಳಲ್ಲಿ ಐದು ವರ್ಷದೊಳಗಿನ ಹೆಣ್ಣು ಮಕ್ಕಳ ಚಿಕಿತ್ಸೆಗೆ ಯಾವುದೇ ಶುಲ್ಕ ನೀಡುವಂತಿಲ್ಲ ಎಂದು ಪಂಜಾಬ್ ಸರ್ಕಾರದ ವಕ್ತಾರರು ಇಲ್ಲಿ ತಿಳಿಸಿದ್ದಾರೆ.

ರಾಷ್ಟ್ರದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಪಂಜಾಬಿನ ಲಿಂಗಾನುಪಾತ ತೀರಾ ವ್ಯತಿರಿಕ್ತವಾಗಿದ್ದು, 1000 ಪುರುಷರಿಗೆ ಕೇವಲ 895 ಸ್ತ್ರೀಯರಿದ್ದಾರೆ. ಲಿಂಗಾನುಪಾತದಲ್ಲಿ ಸಮತೋಲನ ತರುವ ಉದ್ದೇಶದಿಂದ ಪಂಜಾಬ್ ಸರ್ಕಾರ ಹಲವು ರೀತಿಯ ಯೋಜನೆಗಳನ್ನು ಈಗಾಗಲೇ ರೂಪಿಸಿದ್ದು, ಅದರಲ್ಲಿ ಉಚಿತ ಹೆರಿಗೆ ಹಾಗೂ 5 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡುವುದೂ ಸೇರಿದೆ ಎಂದು ಅವರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.