ಜಮ್ಮು/ವಾಘಾ ಗಡಿ (ಪಿಟಿಐ): ಭಾರತದ ಗಡಿ ಭದ್ರತಾ ಪಡೆಯ ಯೋಧರಿಗೆ ವಾಘಾ ಗಡಿಯಲ್ಲಿ ಭಾನುವಾರ ಸಿಹಿ ಹಂಚಿದ ಪಾಕಿಸ್ತಾನ, ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ.
ಪಾಕಿಸ್ತಾನವು ಭಾನುವಾರ ಸ್ವಾತಂತ್ರ್ಯ ದಿನ ಆಚರಿಸಿಕೊಂಡಿದೆ. ಇದರ ಅಂಗವಾಗಿ ಪಾಕಿಸ್ತಾನದ ರೇಂಜರ್‌ಗಳು ಭಾರತದ ಯೋಧರಿಗೆ ಸಿಹಿ ಹಂಚಿದರು. ಭಾರತದ ಯೋಧರು ಸೋಮವಾರ ಪಾಕಿಸ್ತಾನಿ ಸೈನಿಕರಿಗೆ ಸಿಹಿ ವಿತರಿಸಲಿದ್ದಾರೆ.
ಉಲ್ಲಂಘನೆ: ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನದ ಸೇನೆ, ಎರಡು ಕಡೆ ಗುಂಡಿನ ದಾಳಿ ನಡೆಸಿದೆ. ಪೂಂಛ್ ವಲಯದಲ್ಲಿ ಶೆಲ್ ದಾಳಿ ನಡೆಸಿದೆ. ನಾಲ್ಕು ತಿಂಗಳ ನಂತರ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ ಇದು.
ಪಾಕಿಸ್ತಾನದ ಪ್ರಚೋದನೆಗೆ ಪ್ರತ್ಯುತ್ತರ ನೀಡುತ್ತಿರುವ ಭಾರತೀಯ ಸೇನೆ, ಗುಂಡಿನ ದಾಳಿ ನಡೆಸುತ್ತಿದೆ ಎಂದು ವರದಿಯಾಗಿದೆ. ‘ಪಾಕಿಸ್ತಾನದ ಸೇನೆ ಯಾವುದೇ ಪ್ರಚೋದನೆ ಇಲ್ಲದೆ ಕದನ ವಿರಾಮ ಉಲ್ಲಂಘಿಸಿತು’ ಎಂದು ರಕ್ಷಣಾ ಪಡೆಗಳ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ತಿಳಿಸಿದರು.
ಪಾಕ್ ಸೇನೆ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ದಾಳಿ ಆರಂಭಿಸಿತು. ಭಾರತೀಯ ಸೇನೆ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತದ ಯೋಧರಿಗೆ ಹಾನಿ ಆಗಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.