ಕೇರಳ: ‘ಒಖಿ’ ಚಂಡಮಾರುತದಿಂದ ಕೇರಳದ ಕಡಲತೀರದಲ್ಲಿ ಅಪಾಯದಲ್ಲಿ ಸಿಲುಕಿದ್ದ 200ಕ್ಕೂ ಹೆಚ್ಚು ಮೀನುಗಾರರನ್ನು ಭಾರತೀಯ ವಾಯುಪಡೆ ಹಾಗೂ ನೌಕಾಪಡೆ, ಕರಾವಳಿ ಪಡೆಗಳು ರಕ್ಷಿಸಿವೆ. ಶುಕ್ರವಾರ ಸಂಜೆ ಮತ್ತು ರಾತ್ರಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಶನಿವಾರವೂ ರಕ್ಷಣಾ ಕಾರ್ಯ ಮುಂದುವರೆದಿದೆ.
ಚಂಡಮಾರುತದ ಪ್ರಭಾವ ಭಾನುವಾರ ಸಂಜೆಯ ವೇಳೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ನಿರ್ದೇಶಕ ಕೆ.ಜೆ. ರಮೇಶ್ ತಿಳಿಸಿದ್ದಾರೆ.
ಕೇರಳದ ಕಡಲತೀರದಲ್ಲಿ ಭಾರತೀಯ ನೌಕಪಡೆ ಮತ್ತು ವಾಯುಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ 200ಕ್ಕೂ ಹೆಚ್ಚು ಮೀನುಗಾರರನ್ನು ರಕ್ಷಿಸಿವೆ. ಶನಿವಾರ(ಡಿ.2) ಸಂಜೆ 6.30ರಿಂದ ರಾತ್ರಿ 10ರವರೆಗೂ 3ರಿಂದ 4.9 ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುಸ್ಸೂಚನೆ ನೀಡಿದೆ.
ಕೇರಳ ಸರ್ಕಾರ ಕರಾವಳಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.