ಭುವನೇಶ್ವರ(ಐಎಎನ್‌ಎ):ಒಡಿಶಾದಲ್ಲಿ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ ಮಂಗಳವಾರ 19ಕ್ಕೆ ತಲುಪಿದ್ದು, 20 ಲಕ್ಷಕ್ಕೂ ಹೆಚ್ಚು ಜನ ತೊಂದರೆಗೀಡಾಗಿದ್ದಾರೆ.
ಭಾರಿ ಮಳೆಯಾಗುತ್ತಿರುವುದರಿಂದ ಹಿರಾಕುಡ್ ಜಲಾಶಯದಿಂದ ಹೆಚ್ಚುವರಿ ನೀರನ್ನು ಬಿಡಲಾಗಿದೆ. ಇದರಿಂದ ಒಟ್ಟು 30 ಜಿಲ್ಲೆಗಳ ಪೈಕಿ 19 ಜಿಲ್ಲೆಗಳಲ್ಲಿನ 3,505 ಮನೆಗಳಿಗೆ ಹಾನಿಯಾಗಿದೆ.
ನೀರು ಇಳಿಮುಖವಾಗಿರುವ ಪ್ರದೇಶಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯರನ್ನು ಕಳುಹಿಸಲಾಗಿದೆ. ಮಳೆ ನೀರಿನಿಂದ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.