ADVERTISEMENT

ಒಡಿಶಾ : ಗುಂಡಿಕ್ಕಿ ಶಾಸಕನ ಹತ್ಯೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2011, 8:35 IST
Last Updated 24 ಸೆಪ್ಟೆಂಬರ್ 2011, 8:35 IST

 ಭುವನೇಶ್ವರ , (ಐಎಎನ್ಎಸ್): ಶಾಸಕ ಹಾಗೂ ಅವರ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬನನ್ನು ಗುಂಡಿಕ್ಕಿ ಸಾಯಿಸಿದ ದಾರುಣ ಘಟನೆ ನಬ್ರಂಗಪುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 

ಬಿಜು ಜನತಾದಳ  (ಬಿಜೆಡಿ) ಶಾಸಕ ಜಗಬಂಧು ಮಝಿ ಹಾಗೂ ಅವರ ಖಾಸಗಿ ಭದ್ರತಾ ಸಿಬ್ಬಂದಿಯನ್ನು ಇಲ್ಲಿನ ನಬ್ರಂಗಪುರ ಜಿಲ್ಲೆಯ ಜನನಿಬೀಡ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 ಅಪರಾಧಿಯ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.