ADVERTISEMENT

ಓಂಪುರಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2013, 19:59 IST
Last Updated 1 ಸೆಪ್ಟೆಂಬರ್ 2013, 19:59 IST

ಮುಂಬೈ(ಪಿಟಿಐ): ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದ ಬಾಲಿವುಡ್ ನಟ ಓಂಪುರಿ ಅವರಿಗೆ ಮುಂಬೈನ ನ್ಯಾಯಾಲಯ ಶನಿವಾರ ಷರತ್ತುಬದ್ಧ ಜಾಮೀನು ನೀಡಿದೆ.

ಜತೆಗೆ ಶೂಟಿಂಗ್‌ಗೆ ಬ್ರಿಟನ್‌ಗೆ ತೆರಳಲು ಅವಕಾಶ ನೀಡಲಾಗಿದೆ.

ಓಂಪುರಿ ಅವರು ಚಿತ್ರದ ಶೂಟಿಂಗ್‌ಗಾಗಿ ದೇಶಬಿಟ್ಟು ಹೋಗದಂತೆ ಪತ್ನಿ ನಂದಿತಾ ಮನವಿ ಮಾಡಿದ್ದರು. ಶೂಟಿಂಗ್‌ಗೆ ವಿದೇಶಕ್ಕೆ ತೆರಳಲು ಅವಕಾಶ ನೀಡಿದ್ದರಿಂದ ಬಾಲಿವುಡ್ ನಟ ನಿಟ್ಟಿಸಿರು ಬಿಡುವಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.