ADVERTISEMENT

ಕಂಚಿ ಪೀಠದ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ನಿಧನ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2018, 6:09 IST
Last Updated 28 ಫೆಬ್ರುವರಿ 2018, 6:09 IST
ಕಂಚಿ ಪೀಠದ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ನಿಧನ
ಕಂಚಿ ಪೀಠದ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ನಿಧನ   

ಚೆನ್ನೈ: ತಮಿಳುನಾಡಿನ ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸ್ವಾಮೀಜಿಯವರನ್ನುಕಳೆದ ತಿಂಗಳು ಜನವರಿಯಲ್ಲಿ ಇಲ್ಲಿನ ಶಂಕರ  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಕಂಚಿ ಮಠದ ಮೂಲಗಳು ತಿಳಿಸಿವೆ.

ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರಿಗೆ 82 ವರ್ಷ ವಯಸ್ಸಾಗಿತ್ತು. ಈ ಮಠದ 69ನೇ ಪೀಠಾಧಿಪತಿಯಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.