ADVERTISEMENT

ಕಚೇರಿಗಳಲ್ಲಿ ಲಂಚ: ಅಣ್ಣಾ ಚಳವಳಿ ಆರಂಭ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2011, 19:30 IST
Last Updated 23 ಸೆಪ್ಟೆಂಬರ್ 2011, 19:30 IST

ನವದೆಹಲಿ, (ಐಎಎನ್‌ಎಸ್): ಲಂಚ ತೆಗೆದುಕೊಳ್ಳುವುದರ ವಿರುದ್ಧ ಉದ್ಯೋಗಿಗಳಲ್ಲಿ ಜಾಗೃತಿ ಮೂಡಿಸಲು ದೇಶದಾದ್ಯಂತ ರಾಜಧಾನಿಗಳಲ್ಲಿ ಇರುವ ಸರ್ಕಾರಿ ಕಚೇರಿಗಳಲ್ಲಿ ಅಣ್ಣಾ ಹಜಾರೆ ತಂಡದ ಸದಸ್ಯರು ಶುಕ್ರವಾರ ಚಳವಳಿಯನ್ನು ಆರಂಭಿಸಿದರು. `ಲಂಚ ಬೇಡ ಎಂದು ಹೇಳುವ ಚಳವಳಿ~ ಅಂಗವಾಗಿ ವಾರಕ್ಕೆ ಒಂದು ಬಾರಿ ಭ್ರಷ್ಟಾಚಾರ ವಿರುದ್ಧ ಭಾರತ ಸಂಘಟನೆಯ ತಂಡ ರಾಜಧಾನಿಗಳ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.