ADVERTISEMENT

ಕಠುವಾ ಅತ್ಯಾಚಾರ ಪ್ರಕರಣ: ವಿಚಾರಣೆಗೆ ವಿಶೇಷ ನ್ಯಾಯಾಲಯ–ಮೆಹಬೂಬಾ ಪತ್ರ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2018, 8:54 IST
Last Updated 19 ಏಪ್ರಿಲ್ 2018, 8:54 IST
ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಜಮ್ಮ ಕಾಶ್ಮೀರ ವಿದ್ಯಾರ್ಥಿಗಳು        –ಪಿಟಿಐ ಚಿತ್ರ
ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಜಮ್ಮ ಕಾಶ್ಮೀರ ವಿದ್ಯಾರ್ಥಿಗಳು –ಪಿಟಿಐ ಚಿತ್ರ   

ಶ್ರೀನಗರ: ಕಠುವಾದಲ್ಲಿ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು 90 ದಿನಗಳ ಒಳಗೆ ಪೂರ್ಣಗೊಳಿಸಲು ವಿಶೇಷ ತ್ವರಿತ ಗತಿಯ ನ್ಯಾಯಾಲಯ ಸ್ಥಾಪಿಸುವಂತೆ ಕೋರಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ರಾಜ್ಯ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದಾರೆ.

ಒಂದು ವೇಳೆ ನ್ಯಾಯಾಲಯ ರಚನೆಯಾದರೆ ರಾಜ್ಯದ ಮೊದಲ ತ್ವರಿತ ಗತಿಯ ನ್ಯಾಯಾಲಯ ಇದಾಗಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT