ಚೆನ್ನೈ (ಪಿಟಿಐ): ಎಐಎಡಿಂಕೆ ಪಕ್ಷದ ಮುಖ್ಯಸ್ಥೆ ಜಯಲಲಿತಾ ಅವರ ದೂರವಾಣಿ ಸಂಬಾಷಣೆಯ ಕದ್ದಾಲಿಕೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಿರುವ ಪಕ್ಷ, ಜಯಲಲಿತಾ ಅವರ ನಿವಾಸವನ್ನು ಪರಿಶೀಲನೆ ನಡೆಸಿದ್ದ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
ಡಿಎಂಕೆ ಸರ್ಕಾರ ಜಯಲಲಿತಾ ಅವರ ದೂರವಾಣಿ ಕದ್ದಾಲಿಕೆ ಮೂಲಕ ಮಾನವಹಕ್ಕುಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಮುಖ್ಯಮಂತ್ರಿ ಕರುಣಾನಿಧಿ ಅವರ ಸೂಚನೆ ಮೇರೆಗೆ ಪೊಲೀಸರು ಅವರ ರಾಜಕೀಯ ವ್ಯವಹಾರಗಳ ಬಗ್ಗೆ ತಿಳಿದುಕೊಳ್ಳಲು ದೂರವಾಣಿ ಕದ್ದಾಲಿಕೆ ನಡೆಸಿದ್ದಾರೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ, ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಎಐಎಡಿಎಂಕೆ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.