ADVERTISEMENT

ಕದ್ದಾಲಿಕೆ ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2012, 19:30 IST
Last Updated 25 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ರಕ್ಷಣಾ ಸಚಿವರ ಕಚೇರಿಯಲ್ಲಿನ ಫೋನ್ ಕದ್ದಾಲಿಕೆಯಲ್ಲಿ ಸೇನಾಪಡೆ ಮುಖ್ಯಸ್ಥ ಜನರಲ್ ವಿ.ಕೆ.ಸಿಂಗ್ ಅವರ ಪಾತ್ರದ ಬಗ್ಗೆ ಸಿಬಿಐ ತನಿಖೆ ನಡೆಸಲು ಕೋರಿ ನಿವೃತ್ತ ಲೆಫ್ಟಿನೆಂಟ್ ಜನರಲ್ ತೇಜಿಂದರ್ ಸಿಂಗ್ ಬುಧವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುವ ವಿ.ಕೆ.ಸಿಂಗ್ ರಾಜಕೀಯ ಹೇಳಿಕೆಗಳನ್ನು ನೀಡುವ ಮೂಲಕ ವೃತ್ತಿಯಲ್ಲಿ ದುರ್ವರ್ತನೆ ತೋರುತ್ತಿದ್ದಾರೆ. ನಕ್ಸಲರ ಹಾವಳಿ ನಿಯಂತ್ರಿಸಲು ಸರ್ಕಾರವು ಸೇನೆಯ ನೆರವು ಕೋರಿದೆ. ಆದರೆ ವಿ.ಕೆ.ಸಿಂಗ್ ಅವರು, ರಾಷ್ಟ್ರದಲ್ಲಿನ ಮಾವೊವಾದಿ ಸಮಸ್ಯೆ ಸರ್ಕಾರವೇ ಹುಟ್ಟುಹಾಕಿರುವ ಸಮಸ್ಯೆ ಎಂದು ಹೇಳಿಕೆ ನೀಡಿರುವುದು ವೃತ್ತಿ ದುರ್ವರ್ತನೆ ಎಂದಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ತೇಜಿಂದರ್ ಅವರು ವಿ.ಕೆ.ಸಿಂಗ್ ಹಾಗೂ ಇತರ ನಾಲ್ವರು ಹಿರಿಯ ಸೇನಾ ಅಧಿಕಾರಿಗಳ ವಿರುದ್ಧ ಅಧೀನ ನ್ಯಾಯಾಲಯವೊಂದರಲ್ಲಿ ಮಾನಹಾನಿ ದಾವೆ ಹೂಡಿದ್ದಾರೆ.  ಸೇನಾ ಮುಖ್ಯಸ್ಥರನ್ನು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಬಹುದೇ ಅಥವಾ ಇಲ್ಲವೇ ಎಂಬುದರ ಬಗ್ಗೆಯೂ ಸ್ಪಷ್ಟಪಡಿಸಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.