ADVERTISEMENT

ಕನಿಮೊಳಿಗೆ ಬಿಡುಗಡೆ ಭಾಗ್ಯ?

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2011, 19:30 IST
Last Updated 10 ಅಕ್ಟೋಬರ್ 2011, 19:30 IST

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಂಚಿಕೆ ವಿವಾದದಲ್ಲಿ ಸುಮಾರು 6 ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ಡಿಎಂಕೆ ಸಂಸದೆ ಕನಿಮೊಳಿ ಅವರಿಗೆ ಕೊನೆಗೂ ಬಿಡುಗಡೆಯ ಭಾಗ್ಯ ದೊರಕುವ ನಿರೀಕ್ಷೆ ಇದೆ.

ಇದೇ 17ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ ಅವರ ಮುಂದೆ ಬರಲಿದೆ. ಈ ಸಂದರ್ಭದಲ್ಲಿ ಜಾಮೀನಿಗೆ ವಿರೋಧ ವ್ಯಕ್ತಪಡಿಸದಿರಲು ಸಿಬಿಐ ನಿರ್ಧರಿಸಿದೆ.

 ಸಿನಿಯುಗ್ ಫಿಲ್ಮ್ಸ್ ಸಂಸ್ಥಾಪಕ ಕರೀಂ ಮೊರಾನಿ ಹಾಗೂ ರಿಲಯನ್ಸ್ ಕಾರ್ಯನಿರ್ವಾಹಕ ಅಧಿಕಾರಿ ಸುರೇಂದ್ರ ಪಿಪರಾ ಅವರೂ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಪಡೆಯುವ ನಿರೀಕ್ಷೆ ಇದೆ. ಇದಕ್ಕೂ ಸಿಬಿಐ ತಕರಾರು ಮಾಡುವುದಿಲ್ಲ ಎಂದು ತನಿಖಾ ಸಂಸ್ಥೆಯ ಉನ್ನತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.