ನವದೆಹಲಿ (ಪಿಟಿಐ): ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರ ಪುತ್ರಿ ಎಂ. ಕನಿಮೊಳಿ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಂಸತ್ತಿನ ಮೇಲ್ಮನೆಗೆ ಜೂನ್ನಲ್ಲಿ ಕನಿಮೊಳಿ ಪುನರಾಯ್ಕೆ ಆಗಿದ್ದರು. ಈ ಸಂದರ್ಭದಲ್ಲಿ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಕನಿಮೊಳಿಗೆ ಶುಭಾಶಯ ಕೋರಿದರು. ಮಾತೃಭಾಷೆ ತಮಿಳಿನಲ್ಲೇ ಕನಿಮೊಳಿ ಪ್ರಮಾಣ ವಚನ ಸ್ವೀಕರಿಸಿದ್ದು, ವಿಶೇಷವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.