ADVERTISEMENT

ಕಪ್ಪುಹಣ ವಿವರ ಬಹಿರಂಗಕ್ಕೆ ಕಾಯ್ದೆ ತೊಡಕು

​ಪ್ರಜಾವಾಣಿ ವಾರ್ತೆ
Published 25 ಜನವರಿ 2011, 19:30 IST
Last Updated 25 ಜನವರಿ 2011, 19:30 IST

ನವದೆಹಲಿ (ಪಿಟಿಐ): ಭಾರತೀಯರು ವಿದೇಶದಲ್ಲಿ ಇಟ್ಟಿರುವ ಕಪ್ಪು ಹಣದ ವಿವರವನ್ನು ಬಹಿರಂಗ ಪಡಿಸಲು ಸಾಧ್ಯವೇ ಇಲ್ಲ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ತಿಳಿಸಿದರು.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಹ ಕಪ್ಪುಹಣದ ಮಾಹಿತಿ ಬಯಲುಗೊಂಡರೆ ಸರ್ಕಾರ ಉರುಳುತ್ತದೆ ಎಂಬ ಭಯ ಕೇಂದ್ರಕ್ಕಿಲ್ಲ, ಆದರೆ ಈ ನಿಟ್ಟಿನಲ್ಲಿ ಕಾನೂನು ತೊಡಕು ಇರುವುದರಿಂದ ಮಾಹಿತಿ ಬಹಿರಂಗ ಅಸಾಧ್ಯ ಎಂದರು.

 ಕಪ್ಪು ಹಣ ಬಹಿರಂಗಕ್ಕೆ ಸರ್ಕಾರ ಹಿಂದೇಟು ಹಾಕುತ್ತಿರುವುದಕ್ಕೆ ವಿರೋಧ ಪಕ್ಷಗಳು ಮತ್ತು ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ಎತ್ತುತ್ತಿದ್ದರೂ ಸರ್ಕಾರ ಸುಮ್ಮನೆ ಇರುವುದು ಇದೇ ಕಾರಣಕ್ಕಾಗಿ ಎಂದು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.