ADVERTISEMENT

ಕಮರಿಗೆ ಬಸ್ : 5 ಸಾವು, 8 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2011, 10:50 IST
Last Updated 7 ಮಾರ್ಚ್ 2011, 10:50 IST

ಫೈಜಾಬಾದ್ (ಪಿಟಿಐ): ಚಾಲಕನ ನಿಯಂತ್ರಣ ಕಳೆದುಕೊಂಡ ಪ್ರಯಾಣಿಕರ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ ಐವರು ಮೃತರಾಗಿ, 8 ಮಂದಿ ಗಾಯಗೊಂಡ ಘಟನೆ ಇಲ್ಲಿನ ರುಡೌಲಿ ಪೊಲೀಸ್ ಸರಹದ್ದಿನ ರೌಜಗಾಂವ್‌ನಲ್ಲಿ ಸೋಮವಾರ ನಸುಕಿನ ಜಾವ ಘಟಿಸಿದೆ. ನಸುಕಿನ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಈ ಸಂದರ್ಭದಲ್ಲಿ ಬಸ್ಸು ಲಖನೌಗೆ ಪ್ರಯಾಣ ಹೊರಟಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.