ADVERTISEMENT

ಕರುಣಾನಿಧಿಗೆ 94ರ ಸಂಭ್ರಮ

ಪಿಟಿಐ
Published 3 ಜೂನ್ 2017, 19:30 IST
Last Updated 3 ಜೂನ್ 2017, 19:30 IST
ಕರುಣಾನಿಧಿ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಳ್ಳಲು ಶನಿವಾರ ಚೆನ್ನೈಗೆ ಬಂದಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಾಗೂ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರೊಂದಿಗೆ ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್‌ (ಮಧ್ಯದಲ್ಲಿರುವವರು) ಪಿಟಿಐ ಚಿತ್ರ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ. ಕರುಣಾನಿಧಿ ಅವರು ಜೂನ್‌ 3ಕ್ಕೆ 94ನೇ ವಯಸ್ಸಿಗೆ ಕಾಲಿಟ್ಟಿದ್ದು, ಶಾಸಕರಾಗಿ 60 ವರ್ಷಗಳನ್ನು ಪೂರೈಸಿದ್ದಾರೆ.

ಈ ಜಂಟಿ ಸಂಭ್ರಮವನ್ನು ಆಚರಿಸಲು ಪಕ್ಷವು ಸಂತೋಷ ಕೂಟ ಆಯೋಜಿಸಿತ್ತು. ಆದರೆ ಕರುಣಾ ನಿಧಿ ಅನಾರೋಗ್ಯದಿಂದ ನಿತ್ರಾಣರಾಗಿರುವುದರಿಂದ ಅವರ ಅನುಪ ಸ್ಥಿತಿಯಲ್ಲೇ ಕಾರ್ಯಕ್ರಮ ನಡೆಯಿತು.

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಸಿಪಿಐ, ಸಿಪಿಎಂ ಹಾಗೂ ತೃಣಮೂಲ ಕಾಂಗ್ರೆಸ್‌ ಮುಖಂಡರು ಭಾಗವಹಿಸಿದ್ದರು.

ADVERTISEMENT

ಇದಕ್ಕೆ ಮುನ್ನ ರಾಹುಲ್‌ ಹಾಗೂ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್‌  ಪ್ರತ್ಯೇಕವಾಗಿ ಸುಮಾರು 30 ನಿಮಿಷಮಾತುಕತೆ ನಡೆಸಿದರು.

ಡಿಎಂಕೆ ಜೊತೆಗಿನ ಕಾಂಗ್ರೆಸ್‌ ಸಂಬಂಧ ಗಟ್ಟಿಗೊಳಿಸುವ ನಿಟ್ಟಿನಲ್ಲಿ ರಾಹುಲ್‌ ಭೇಟಿ ಮಹತ್ವ ಪಡೆದುಕೊಂಡಿದೆ. ಸೋನಿಯಾ ಗಾಂಧಿ ಸೇರಿದಂತೆ ಹಲವರು ದೂರವಾಣಿ ಮೂಲಕ ಶುಭ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.