ADVERTISEMENT

ಕಲಾಪ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2012, 19:30 IST
Last Updated 16 ಮಾರ್ಚ್ 2012, 19:30 IST

ಹೈದರಾಬಾದ್ (ಪಿಟಿಐ):  ಕಳಂಕಿತ ಸಚಿವರ ವಿರುದ್ಧದ ವಿಷಯದಲ್ಲಿ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ ಸತತ ಐದನೇ ದಿನವೂ ಮುಂದುವರಿದಿದ್ದರಿಂದ ಶುಕ್ರವಾರ ಕಲಾಪ ಮುಂದೂಡಲಾಯಿತು.

ವಿರೋಧ ಪಕ್ಷಗಳ ಸದಸ್ಯರು ಸದನದಲ್ಲಿ ಮಸೂದೆಗಳ ಮಂಡನೆ ತಡೆದು ಕಲಾಪಕ್ಕೆ ಅಡ್ಡಿಪಡಿಸಿ ಸ್ಪೀಕರ್ ಬಾವಿಗೆ ನುಗ್ಗಿ ಧರಣಿ ಆರಂಭಿಸಿದಾಗ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.