ADVERTISEMENT

ಕಲ್ಮಾಡಿ ಜಾಮೀನು: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

​ಪ್ರಜಾವಾಣಿ ವಾರ್ತೆ
Published 10 ಜನವರಿ 2012, 19:30 IST
Last Updated 10 ಜನವರಿ 2012, 19:30 IST

ನವದೆಹಲಿ (ಐಎಎನ್‌ಎಸ್): ಕಾಮನ್‌ವೆಲ್ತ್ ಕ್ರೀಡಾಕೂಟದ ಹಗರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಸಂಸದ ಸುರೇಶ್ ಕಲ್ಮಾಡಿ ಮತ್ತು ಅವರ ಸಹಾಯಕ ವಿ. ಕೆ. ವರ್ಮಾ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ.

ಕಾಮನ್‌ವೆಲ್ತ್ ಕ್ರೀಡಾಕೂಟದ ಸಿದ್ಧತೆಯ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಸಿದ ಆಪಾದನೆಗಾಗಿ ಕಲ್ಮಾಡಿ ಅವರನ್ನು ಕಳೆದ ವರ್ಷದ ಏಪ್ರಿಲ್ 26ರಂದು ಬಂಧಿಸಲಾಗಿದೆ.

ಕಲ್ಮಾಡಿ  ಮತ್ತು ವರ್ಮಾ ಅವರಿಗೆ ಜಾಮೀನು ನೀಡಿದರೆ ಅವರು ಸಾಕ್ಷಿಗಳನ್ನು ಬೆದರಿಸುವ ಸಾಧ್ಯತೆಗಳು ಇರುವುದರಿಂದ ಜಾಮೀನು ನೀಡಬಾರದು ಎಂದು ಸಿಬಿಐ ವಕೀಲರು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.