ADVERTISEMENT

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ : ಕೇಂದ್ರ, ಸಿಬಿಐಗೆ ಸುಪ್ರೀಂ ನೋಟಿಸ್

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2012, 19:30 IST
Last Updated 19 ನವೆಂಬರ್ 2012, 19:30 IST

ನವದೆಹಲಿ (ಪಿಟಿಐ): ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದ ತನಿಖೆಯನ್ನು ವಿಶೇಷ ತನಿಖಾ ತಂಡದ(ಎಸ್‌ಐಟಿ) ಮೂಲಕನಡೆ ಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್, ಸಿಬಿಐ  ಹಾಗೂ ಕೇಂದ್ರ ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿ ಮಾಡಿದೆ.

 ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಂ. ಲೋಧಾ ಮತ್ತು ಎ.ಆರ್. ದವೆ ಅವರನ್ನೊಳಗೊಂಡ ನ್ಯಾಯಪೀಠ, ಈ ಬಗ್ಗೆ ಸೂಕ್ತ ಪ್ರತಿಕ್ರಿಯೆ ನೀಡುವಂತೆ ಸಿಬಿಐ ಹಾಗೂ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಆದರೆ, ಕಾನೂನುಗಳನ್ನು ಉಲ್ಲಂಘಿಸಿ ನೀಡಲಾಗಿದೆ ಎನ್ನಲಾದ ಕಲ್ಲಿದ್ದಲು ನಿಕ್ಷೇಪಗಳ ಪರವಾನಗಿಗಳಿಗೆ ತಡೆ ನೀಡಲು ನ್ಯಾಯಪೀಠ ನಿರಾಕರಿಸಿದೆ.

ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ 8 ವಾರಗಳೊಳಗೆ ವರದಿ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಜ. 24ಕ್ಕೆ ಮುಂದೂಡಿತು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.