ADVERTISEMENT

ಕಲ್ಲಿದ್ದಲು ಹಗರಣ: ನವೀನ್‌ಜಿಂದಾಲ್, ಮಾಜಿ ಸಚಿವ ದಾಸರಿ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 11 ಜೂನ್ 2013, 10:02 IST
Last Updated 11 ಜೂನ್ 2013, 10:02 IST

ನವದೆಹಲಿ (ಪಿಟಿಐ): ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ದಾಸರಿ ನಾರಾಯಣ ರಾವ್ ಹಾಗೂ ಸಂಸದ ನವೀನ್ ಜಿಂದಾಲ್ ವಿರುದ್ಧ ಸಿಬಿಐ ಹೊಸ ಎಫ್‌ಐಆರ್ ಅನ್ನು ಮಂಗಳವಾರ ದಾಖಲಿಸಿಕೊಂಡಿದೆ.

ದೆಹಲಿ ಮತ್ತು ಹೈದರಾಬಾದ್‌ನಲ್ಲಿರುವ ಜಿಂದಾಲ್ ಮತ್ತು  ಮಾಜಿ ಸಚಿವ ದಾಸರಿ ನಾರಾಯಣ ರಾವ್ ಅವರ ಕಚೇರಿ ಮತ್ತು ನಿವಾಸದ ಮೇಲೆ ಇಂದು ಸಿಬಿಐ ಅಧಿಕಾರಿಗಳು ಏಕ ಕಾಲದಲ್ಲೇ ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವಾದಂತಾಗಿದೆ.

ಕಲ್ಲಿದ್ದಲು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇದುವರೆಗೂ 12 ಎಫ್‌ಐಆರ್‌ಗಳನ್ನು ದಾಖಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.