ADVERTISEMENT

ಕಳ್ಳಬಟ್ಟಿಗೆ 18 ಬಲಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2012, 22:00 IST
Last Updated 9 ಡಿಸೆಂಬರ್ 2012, 22:00 IST

ಪಟ್ನಾ (ಐಎಎನ್‌ಎಸ್): ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಕಳ್ಳಬಟ್ಟಿ ಕುಡಿದು ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿದೆ. ಶನಿವಾರ ಬೆಳಿಗ್ಗೆಯೇ 11 ಜನರು ಮೃತಪಟ್ಟಿದ್ದಾರೆ. ಗುರುವಾರ ಮತ್ತು ಶುಕ್ರವಾರ ಕ್ರಮವಾಗಿ ಒಂಬತ್ತು ಮತ್ತು ಇಬ್ಬರು ಸಾವನ್ನಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಭೋಜ್‌ಪುರ ಜಿಲ್ಲೆಯ ಅನಿತಾ ಗ್ರಾಮದಲ್ಲಿ ಕಳ್ಳಭಟ್ಟಿಯ ಮೊದಲ ಪ್ರಕರಣ ಸಂಭವಿಸಿದೆ. ಘಟನೆ ಸಂಬಂಧ 16 ಜನರನ್ನು ಬಂಧಿಸಲಾಗಿದೆ. ಈ ಬಗ್ಗೆ ವರದಿ ನೀಡಲು ಆರು ಜನರ ಸಮಿತಿಯನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ನ್ಯಾಯಾಧೀಶ ಪ್ರೀತಂ ಎಸ್. ವರ್ಮ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.