ADVERTISEMENT

ಕಸಾಬ್ ಮೇಲ್ಮನವಿ: ತೀರ್ಪು ಕಾಯ್ದಿರಿಸಿದ ಸುಪ್ರಿಂಕೋರ್ಟ್

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2012, 19:30 IST
Last Updated 25 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ಮುಂಬೈ ಮೇಲೆ ದಾಳಿ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕ ಮೊಹಮದ್ ಅಜ್ಮಲ್ ಕಸಾಬ್ ತನಗೆ ನೀಡಲಾಗಿರುವ ಮರಣದಂಡನೆ  ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಬುಧವಾರ ಕಾಯ್ದಿರಿಸಿದೆ.

ಕಳೆದ ಎರಡೂವರೆ ತಿಂಗಳಿನಿಂದ ನಡೆಯುತ್ತಿರುವ ಸುದೀರ್ಘ ವಿಚಾರಣೆ ಮತ್ತು ಪರ -ವಿರೋಧ ವಾದ ಆಲಿಸಿದ ನ್ಯಾಯಮೂರ್ತಿ ಅಫ್ತಾಬ್ ಅಲಂ ಮತ್ತು ಸಿ. ಕೆ. ಪ್ರಸಾದ್ ಅವರನ್ನು ಒಳಗೊಂಡ ನ್ಯಾಯಪೀಠವು ತೀರ್ಪನ್ನು ಕಾಯ್ದಿರಿಸಿತು.

ದಾಳಿ ಮಾಡಿದ ಸಂಚಿನಲ್ಲಿ ತಾನು ಪ್ರಮುಖವಾಗಿ ಭಾಗಿಯಾಗಿರಲಿಲ್ಲ ಮತ್ತು  ಮುಕ್ತ ಹಾಗೂ ನ್ಯಾಯಸಮ್ಮತವಾದ ವಿಚಾರಣೆ ನಡೆದಿಲ್ಲ ಎಂದು ಕಸಾಬ್ ಪರ ವಾದ ಮಾಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.