ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷರಾಗಲು ಇಬ್ಬರಿಗೆ ಮಾತ್ರ ಸಾಧ್ಯ! ಆದು ತಾಯಿ ಮತ್ತು ಮಗನಿಗೆ ಮಾತ್ರ ಎಂದು ಕಾಂಗ್ರಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಮಣಿಶಂಕರ್ ಅಯ್ಯರ್ ಅವರ ಈ ಹೇಳಿಕೆ ಕಾಂಗ್ರಸ್ ಪಕ್ಷದಲ್ಲಿ ಮುಜುಗರವನ್ನು ಉಂಟುಮಾಡಿದೆ. ಕಾಂಗ್ರಸ್ ಪಕ್ಷ ಎಂದರೆ ’ ತಾಯಿ ಮಗನ ಪಕ್ಷ’ ಎಂದು ಇತರೆ ಪಕ್ಷಗಳು ಟೀಕೆ ಮಾಡುತ್ತಿದ್ದವು. ಇದೀಗ ಸ್ವಪಕ್ಷದ ಹಿರಿಯ ನಾಯಕರೊಬ್ಬರು ಈ ರೀತಿ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಈಗಾಗಲೇ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.