ADVERTISEMENT

ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಸಿ. ಶುಕ್ಲಾ ನಿಧನ

​ಪ್ರಜಾವಾಣಿ ವಾರ್ತೆ
Published 11 ಜೂನ್ 2013, 10:32 IST
Last Updated 11 ಜೂನ್ 2013, 10:32 IST

ನವದೆಹಲಿ (ಪಿಟಿಐ): ನಕ್ಸಲರ ದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ವಿ.ಸಿ. ಶುಕ್ಲಾ(85) ಮಂಗಳವಾರ ನಿಧನರಾದರು.

ಇಂದು ಮಧ್ಯಾಹ್ನ 2.30ರ ಸುಮಾರಿಗೆ ಇಲ್ಲಿನ ವೇದಾಂತ ಮೆಡಿಸಿಟಿ ಆಸ್ಪತ್ರೆಯಲ್ಲಿ ನಿಧನರಾದರೆಂದು ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೇ 25ರಂದು ಛತ್ತಿಸ್‌ಗಡದ ಅರಣ್ಯ ಪ್ರದೇಶದಲ್ಲಿ ನಕ್ಸಲರು ನಡೆಸಿದ್ದ ದಾಳಿಯಲ್ಲಿ ಶುಕ್ಲಾ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಗುಡ್‌ಗಾವ್‌ನ  ವೇದಾಂತ ಮೆಡಿಸಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.