
ಪ್ರಜಾವಾಣಿ ವಾರ್ತೆಚೆನ್ನೈ (ಪಿಟಿಐ): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿ ಕೊಳ್ಳುವುದಿಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಹೇಳಿದ್ದಾರೆ.
ಭಾನುವಾರ ನಡೆದ ಡಿಎಂಕೆ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ವಿರೋಧಿ ಭಾವನೆ ಪ್ರತಿಧ್ವನಿಸಿತು. ಬಿಜೆಪಿ ಜೊತೆಗೂ ಮೈತ್ರಿ ಸಾಧ್ಯವಿಲ್ಲ. ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಡಿಎಂಕೆ ಪಕ್ಷ ಮೈತ್ರಿಯನ್ನು ಹೊಂದಿತ್ತು. ಆದರೆ ಪ್ರಸ್ತುತ ನಾಯಕತ್ವ ಬೇರೆಯಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.