ADVERTISEMENT

ಕಾಡಾನೆ ದಾಳಿ: ಮೂವರು ಬಲಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2012, 19:59 IST
Last Updated 19 ಡಿಸೆಂಬರ್ 2012, 19:59 IST

ಗೋಲ್‌ಪಾರ(ಅಸ್ಸಾಂ), (ಪಿಟಿಐ): ಕಾಡಾನೆಗಳ ಹಿಂಡು ಗ್ರಾಮಕ್ಕೆ ನುಗ್ಗಿ ನಡೆಸಿದ ದಾಳಿಗೆ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಮೂವರು ಬಲಿಯಾಗಿರುವ ಘಟನೆ ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಧಾಯ್‌ಗಾಂವ್ ಗ್ರಾಮದಲ್ಲಿ ನಡೆದಿದೆ.

ಸಮೀಪದ ಗೋರ್ ಬೆಟ್ಟ ಪ್ರದೇಶದಿಂದ ಗ್ರಾಮಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಮೂವರನ್ನು ಕೊಂದು, ಸ್ಥಳೀಯ ಅಂಗಡಿಮುಗ್ಗಟ್ಟುಗಳು ಹಾಗೂ ಮನೆಗಳ ಮೇಲೆ ದಾಳಿ ನಡೆಸಿ ಹಾನಿಗೊಳಿಸಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಪಾಲಕರು, ಗಾಳಿಯಲ್ಲಿ ಗುಂಡು ಹಾರಿಸಿ ಕಾಡಾನೆಗಳನ್ನು ಪುನಃ ಕಾಡಿಗೆ ಅಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.