ADVERTISEMENT

ಕಾನೂನು ಇಲಾಖೆ ಅಭಿಪ್ರಾಯ ಕೋರಿದ ಕೇಂದ್ರ

ಪಿಟಿಐ
Published 26 ಮಾರ್ಚ್ 2018, 19:30 IST
Last Updated 26 ಮಾರ್ಚ್ 2018, 19:30 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ನವದೆಹಲಿ: ಎಸ್‌ಸಿ/ಎಸ್‌ಟಿ (ದೌರ್ಜನ್ಯ ನಿಯಂತ್ರಣ) ಕಾಯ್ದೆ ಕುರಿತು ನೀಡಿರುವ ತೀರ್ಪು ಪುನರ್‌ ಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಕೇಂದ್ರ ಸರ್ಕಾರವು ಕಾನೂನು ಇಲಾಖೆಯ ಅಭಿಪ್ರಾಯ ಕೋರಿದೆ.

‘ಸುಪ್ರೀಂಕೋರ್ಟ್‌ ತೀರ್ಪಿನಿಂದ ದಲಿತ ಹಾಗೂ ಬುಡಕಟ್ಟು ಸಮುದಾಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಈಗಿರುವ ಕಾನೂನು ನಿಷ್ಫಲವಾಗಲಿದೆ. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯವಾಗಿದೆ’ ಎಂದು ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ಗೆ ಬರೆದಿರುವ ಪತ್ರದಲ್ಲಿ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ತಾವರ್‌ಚಂದ್ ಗೆಹ್ಲೊಟ್ ತಿಳಿಸಿದ್ದಾರೆ.

ತೀರ್ಪಿನ ವಿರುದ್ಧ ಕೂಡಲೇ ಮೇಲ್ಮನವಿ ಸಲ್ಲಿಸಬೇಕು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಹಾಗೂ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗವು ಕೂಡ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು.

ADVERTISEMENT

ಸುಪ್ರೀಂಕೋರ್ಟ್‌ ತೀರ್ಪಿನಲ್ಲೇನಿತ್ತು?
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಕ್ತಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಯಾವುದೇ ಸರ್ಕಾರಿ ನೌಕರರು ಅಥವಾ ವ್ಯಕ್ತಿಗಳ ವಿರುದ್ಧ ದೂರು ದಾಖಲಾದರೆ ತಕ್ಷಣಕ್ಕೆ ಅವರನ್ನು ಬಂಧಿಸಕೂಡದು ಎಂದು ಮಾರ್ಚ್‌ 20ರಂದು ಸುಪ್ರೀಂಕೋರ್ಟ್‌ ನೀಡಿದ ತೀರ್ಪಿನಲ್ಲಿ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.