ADVERTISEMENT

ಕಾನ್ಪುರ: ಅಕ್ರಮ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟಕ್ಕೆ ಇಬ್ಬರು ಬಲಿ

ಏಜೆನ್ಸೀಸ್
Published 4 ಅಕ್ಟೋಬರ್ 2017, 11:32 IST
Last Updated 4 ಅಕ್ಟೋಬರ್ 2017, 11:32 IST
ಕಾನ್ಪುರ: ಅಕ್ರಮ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟಕ್ಕೆ ಇಬ್ಬರು ಬಲಿ
ಕಾನ್ಪುರ: ಅಕ್ರಮ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟಕ್ಕೆ ಇಬ್ಬರು ಬಲಿ   

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಸಾರ್ಸೌಲ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪ್ಟಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ಸಾರ್ಸೌಲ್‌ನಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದ ಕಟ್ಟಡಕ್ಕೆ ಹಾನಿಯಾಗಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.