ADVERTISEMENT

ಕಾಲುವೆಗೆ ಉರುಳಿದ ಬೆಂಗಾವಲು ಪಡೆ ವಾಹನ

​ಪ್ರಜಾವಾಣಿ ವಾರ್ತೆ
Published 5 ಮೇ 2018, 19:30 IST
Last Updated 5 ಮೇ 2018, 19:30 IST
ಕಾಲುವೆಗೆ ಉರುಳಿದ್ದ ಬೆಂಗಾವಲು ಪಡೆ ವಾಹನವನ್ನು ಕ್ರೇನ್‌ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು
ಕಾಲುವೆಗೆ ಉರುಳಿದ್ದ ಬೆಂಗಾವಲು ಪಡೆ ವಾಹನವನ್ನು ಕ್ರೇನ್‌ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ಕವಿಂದರ್‌ ಗುಪ್ತಾ ಅವರ ಬೆಂಗಾವಲು ಪಡೆ ವಾಹನ ಶನಿವಾರ ಕಾಲುವೆಗೆ ಉರುಳಿದೆ.

ಗುಪ್ತಾ ಸಮಾರಂಭವೊಂದರಲ್ಲಿ ಪಾಲ್ಗೊಂಡು ಜಮ್ಮುವಿಗೆ ಹಿಂದಿರುಗುತ್ತಿದ್ದ ವೇಳೆ ನಗರದ ಹೊರವಲಯದಲ್ಲಿ ಈ ಅಪಘಾತ ನಡೆದಿದೆ.

ಅಪಘಾತದಲ್ಲಿ ರಾಜ್ಯ ವಾರ್ತಾ ಮತ್ತು ಪ್ರಚಾರ ಇಲಾಖೆಯ ಛಾಯಾಗ್ರಾಹಕ ಮೃತಪಟ್ಟಿದ್ದಾರೆ. ವಾಹನ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ‌

ADVERTISEMENT

ಅತಿ ವೇಗವಾಗಿ ಓಡುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.