
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಕಾಲು ಮುಟ್ಟಿ ನಮಸ್ಕರಿಸುವುದು ಮತ್ತು ಭಟ್ಟಂಗಿತನ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಶುಕ್ರವಾರ ಕಿವಿ ಮಾತು ಹೇಳಿದ್ದಾರೆ.
ಸಂಸತ್‌ನ ಕೇಂದ್ರ ಸಭಾಂಗಣದಲ್ಲಿ ಬಿಜೆಪಿ ಸಂಸದರ ಜೊತೆಗಿನ ಸಮಾಲೋಚನ ಸಭೆಯಲ್ಲಿ ಮಾತನಾಡಿದ ಅವರು ’ಇನ್ನು ಮುಂದೆ ಯಾರು ನನ್ನ ಕಾಲು ಮುಟ್ಟಿ ನಮಸ್ಕಾರ ಮಾಡಬೇಡಿ ಎಂದು ತಾಕೀತು ಮಾಡಿದರು.
ಭಟ್ಟಂಗಿತನ ಮಾಡದೇ ಶ್ರದ್ಧೆಯಿಂದ ಕೆಲಸ ಮಾಡುವಂತೆ ಸಂಸದರಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.