ADVERTISEMENT

ಕಾಳ್ಗಿಚ್ಚು: ಅರಣ್ಯಾಧಿಕಾರಿ ಅಮಾನತು

ಪಿಟಿಐ
Published 13 ಮಾರ್ಚ್ 2018, 19:30 IST
Last Updated 13 ಮಾರ್ಚ್ 2018, 19:30 IST

ಥೇಣಿ: ಇಲ್ಲಿನ ಪರ್ವತ ಪ್ರದೇಶದಲ್ಲಿ ಕಾಳ್ಗಿಚ್ಚಿನಿಂದ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಮಂಗಳವಾರ ಮೃತಪಟ್ಟಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಸ್ಥಳದಲ್ಲಿ ಶೋಧ ಕಾರ್ಯ ಪೂರ್ಣಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಅರಣ್ಯಾಧಿಕಾರಿಯೊಬ್ಬರನ್ನು ಸರ್ಕಾರ ಅಮಾನತುಗೊಳಿಸಿದೆ. ಒಬ್ಬ ಗೈಡ್‌ನನ್ನು ಬಂಧಿಸಲಾಗಿದೆ.

ಚಾರಣ ಮಾಡಲು ಅನುಮತಿ ಪಡೆಯಲಾಗಿತ್ತು ಎಂದು ಚಾರಣ ಆಯೋಜಿಸಿದ್ದ ಚೆನ್ನೈ ಟ್ರೆಕ್ಕಿಂಗ್ ಕ್ಲಬ್ ಸ್ಪಷ್ಟನೆ ನೀಡಿದೆ. ತಂಡವು ಚಾರಣಕ್ಕೆ ಅನುಮತಿ ಪಡೆದಿರಲಿಲ್ಲ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಸೋಮವಾರ ಆರೋಪಿಸಿದ್ದರು.

ಬೆಟ್ಟದ ತಪ್ಪಲಿನಲ್ಲಿರುವ ಜಮೀನುಗಳ ರೈತರು ಹುಲ್ಲಿಗೆ ಬೆಂಕಿ ಹಚ್ಚಿದ್ದರಿಂದ ಅದು ಅರಣ್ಯಕ್ಕೆ ವ್ಯಾಪಿಸಿ, ಕಾಳ್ಗಿಚ್ಚಿಗೆ ಕಾರಣವಾಗಿದೆ ಎಂದು ಟ್ರೆಕ್ಕಿಂಗ್ ಕ್ಲಬ್ ಆರೋಪಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.