ADVERTISEMENT

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಕಾಲಾವಕಾಶ ಕೋರಿದ ಕೇಂದ್ರ

ಏಜೆನ್ಸೀಸ್
Published 7 ಮೇ 2018, 16:18 IST
Last Updated 7 ಮೇ 2018, 16:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಮಂಡಳಿ ರಚನೆ ಸಂಬಂಧ ಯೋಜನೆ ಸಿದ್ಧಪಡಿಸಲಾಗಿದೆ. ಆದರೆ ಅದನ್ನು ಇನ್ನಷ್ಟು ಸರಿಪಡಿಸಬೇಕಿದೆ. ಹೀಗಾಗಿ ಇನ್ನೂ ಸಮಯ ಬೇಕು ಎಂದು ಕೋರ್ಟ್‌ಗೆ ಸರ್ಕಾರ ಮನವಿ ಮಾಡಿದೆ. ಇದರೊಂದಿಗೆ, ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ನಂತರವೇ ನಿರ್ವಹಣಾ ಮಂಡಳಿ ರಚನೆ ನಿರ್ಧಾರ ಕೈಗೊಳ್ಳುವುದು ಕೇಂದ್ರದ ಇರಾದೆ ಎಂಬುದು ಧೃಡಪಟ್ಟಿದೆ.

ತಮಿಳುನಾಡು ಮತ್ತು ಕರ್ನಾಟಕದ ನಡುವೆ ಕಾವೇರಿ ನದಿ ನೀರು ಹಂಚಿಕೊಳ್ಳುವ ವಿಚಾರವಾಗಿ ನಿರ್ವಹಣಾ ಮಂಡಳಿ ರಚಿಸುವಂತೆ ಫೆಬ್ರುವರಿಯಲ್ಲಿ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಸರ್ವೋಚ್ಚ ನ್ಯಾಯಾಲಯದ ನೀಡಿದ ಗಡುವಿಗೂ ಮುನ್ನ ಆ ಕುರಿತು ಕ್ರಮ ಕೈಗೊಳ್ಳುವಲ್ಲಿ ಕೇಂದ್ರ ವಿಫಲವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.